عربيEnglish

مريم ابنت عمران عليها السلام موسوعة القرآن الكريم

Towards providing reliable exegeses and translations of the meanings of the Noble Qur'an in the world languages

The Forgiver [Ghafir] - Kannada translation - Hamza Butur - Ayah 28

Surah The Forgiver [Ghafir] Ayah 85 Location Maccah Number 40

وَقَالَ رَجُلٞ مُّؤۡمِنٞ مِّنۡ ءَالِ فِرۡعَوۡنَ يَكۡتُمُ إِيمَٰنَهُۥٓ أَتَقۡتُلُونَ رَجُلًا أَن يَقُولَ رَبِّيَ ٱللَّهُ وَقَدۡ جَآءَكُم بِٱلۡبَيِّنَٰتِ مِن رَّبِّكُمۡۖ وَإِن يَكُ كَٰذِبٗا فَعَلَيۡهِ كَذِبُهُۥۖ وَإِن يَكُ صَادِقٗا يُصِبۡكُم بَعۡضُ ٱلَّذِي يَعِدُكُمۡۖ إِنَّ ٱللَّهَ لَا يَهۡدِي مَنۡ هُوَ مُسۡرِفٞ كَذَّابٞ [٢٨]

ಫರೋಹ‍ನ ಜನರಲ್ಲಿ ಸೇರಿದ ಮತ್ತು ತನ್ನ ವಿಶ್ವಾಸವನ್ನು ಮುಚ್ಚಿಟ್ಟಿದ್ದ ಸತ್ಯವಿಶ್ವಾಸಿ ವ್ಯಕ್ತಿಯೊಬ್ಬರು ಹೇಳಿದರು: “ನನ್ನ ಪರಿಪಾಲಕ ಅಲ್ಲಾಹು ಎಂದು ಹೇಳುವ ಕಾರಣಕ್ಕಾಗಿ ನೀವು ಒಬ್ಬ ಮನುಷ್ಯನನ್ನು ಕೊಲ್ಲುತ್ತೀರಾ? ಅವರು ನಿಮ್ಮ ಬಳಿಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಸಾಕ್ಷ್ಯಾಧಾರಗಳನ್ನು ತಂದಿದ್ದಾರೆ. ಅವರು ಸುಳ್ಳು ಹೇಳುತ್ತಿದ್ದರೆ ಅದರ ಪಾಪವು ಅವರಿಗೇ ಆಗಿದೆ. ಆದರೆ ಅವರು ಸತ್ಯ ಹೇಳುತ್ತಿದ್ದರೆ ಅವರು ನಿಮಗೆ ಎಚ್ಚರಿಕೆ ನೀಡುವ ಕೆಲವು ಸಂಗತಿಗಳು (ಶಿಕ್ಷೆಗಳು) ನಿಶ್ಚಯವಾಗಿಯೂ ನಿಮ್ಮ ಮೇಲೆ ಎರಗುವುದು. ನಿಶ್ಚಯವಾಗಿಯೂ ಅತಿರೇಕಿ ಮತ್ತು ಸುಳ್ಳನಾಗಿರುವ ಯಾರಿಗೂ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.